ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ್ (ರೂಸಾ)

ಇದು ಭಾರತ ಸರ್ಕಾರದ ಮಾನವ ಸಂಪನ್ಮೂಲ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆ. ಮೂಲ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಪಡೆದ ಗರಿಷ್ಠ ಸಂಖ್ಯೆಯ ಕಾಲೇಜುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದೆ. ಈ ಯೋಜನೆಯನ್ನು ವಿವಿದ ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

 

ರೂಸಾ-1ರ ಅಡಿಯಲ್ಲಿ

 

  • ಮೂಲ ಸೌಕರ್ಯ ಅಭಿವೃದ್ಧಿಗೆ 189 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ  ಪ್ರತಿ ಕಾಲೇಜಿಗೆ ರೂ. 2-00 ಕೋಟಿ ಅನುದಾನವನ್ನು ನೀಡಲಾಗಿದೆ. ಬೋಧನೆ-ಕಲಿಕೆ ಗುಣಮಟ್ಟ ಸುಧಾರಣೆಗೆ ಈ ಎಲ್ಲಾ ಕಾಲೇಜುಗಳಲ್ಲಿ ಐಟಿಸಿ ಸಾಧನಗಳನ್ನು ಸ್ಥಾಪಿಸಲಾಗಿದೆ ಮತ್ತು ಹೊಸ ಕಾಲೇಜು ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ.

 

  • ಮಂಡ್ಯದ ಸ್ವಾಯತ್ತ ಸರ್ಕಾರಿ ಕಾಲೇಜುನ್ನ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತೀಕರಿಸಲಾಗಿದೆ. ಮಹಾರಾಣಿ ವಿಜ್ಞಾನ ಕಾಲೇಜು, ಮಹಾರಾಣಿ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು, ಮತ್ತು ಶ್ರೀಮತಿ ವಿ ಹೆಚ್ ಡಿ ಕೇಂದ್ರೀಯ ಗೃಹ ವಿಜ್ಞಾನ ಕಾಲೇಜುಗಳನ್ನು ಪ್ರತಿ ಕಾಲೇಜಿಗೆ ರೂ 55-00 ಕೋಟಿ ರೂ ವೆಚ್ಚದಲ್ಲಿ ಸಮೂಹ ವಿಶ್ವವಿದ್ಯಾಲಯಗಳನ್ನಾಗಿ ಉನ್ನತಿಕರಿಸಲಾಗಿದೆ.

 

  • ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ನಾಲ್ಕು ಕೋಟಿ ರೂ ವೆಚ್ಚದಲ್ಲಿ ಮಾದರಿ ಪದವಿ ಕಾಲೇಜನ್ನಾಗಿ ಉನ್ನತೀಕರಿಸಲಾಗಿದೆ.

 

ರೂಸಾ-2 ಯೋಜನೆಯಡಿಯಲ್ಲಿ

 

  • ತಲಾ ರೂ. 2 -00 ಕೋಟಿ  ವೆಚ್ಚದಲ್ಲಿ ಎರಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಮೂಲ ಸೌಕರ್ಯ ಅಭಿವೃದ್ಧಿಗೆ ಆಯ್ಕೆ ಮಾಡಲಾಗಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 12-00 ಕೋಟಿ ರೂ ವೆಚ್ಚದಲ್ಲಿ ಎರಡು ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

 

  • ಬೆಂಗಳೂರಿನ ಸ್ವಾಯತ್ತ ಸರ್ಕಾರಿ ವಿಜ್ಞಾನ ಕಾಲೇಜನ್ನು 55-00 ಕೋಟಿ ರೂ ವೆಚ್ಚದಲ್ಲಿ ಏಕೀಕೃತ ವಿಶ್ವವಿದ್ಯಾಲಯವನ್ನಾಗಿ ಉನ್ನತೀಕರಿಸಲಾಗಿದೆ.

 

  • ಸುರಪುರ, ಶಹಾಪುರ ಮತ್ತು ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ ನಾಲ್ಕು ಕೋಟಿ ರೂ ವೆಚ್ಚದಲ್ಲಿ  ಮಾದರಿ ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗಿದೆ.

 

  • ನವೀನ ಉಪಕ್ರಮಗಳ ಅಡಿಯಲ್ಲಿ ಹಾನಸದ ಸರ್ಕಾರಿ ಕಲಾ ಕಾಲೇಜು, ಬಳ್ಳಾರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಡ್ಯಾದ ಸರ್ಕಾರಿ ಮಹಿಳಾ ಕಾಲೇಜು ಮತ್ತು ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳನ್ನು ರೂಸಾ ಅನುದಾನ ತಲಾ 5-00 ಕೋಟಿ ರೂ ಗಳಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ನವೀಕರಣ​ : 31-03-2020 12:07 PM ಅನುಮೋದಕರು: DCE